ಕಾಫಿಯನ್ನು ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ : ದಿನೇಶ್ಚಿಕ್ಕಮಗಳೂರು, ಕಾಫಿ ಬೆಳೆಗಾರರಿಗೆ ಸರ್ಫೆಸಿ ಸೇರಿದಂತೆ ಇತರೆ ಕೆಲ ಸಮಸ್ಯೆಗಳಿಂದ ಹೊರ ಬರಲು ಕಾಫಿಯನ್ನು ವಾಣಿಜ್ಯೋದ್ಯಮದಿಂದ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದ್ದು, ಇದಕ್ಕೆ ರಾಜ್ಯಮಟ್ಟದ ಬೆಳೆಗಾರ ಸಂಘಟನೆಗಳು ಮತ್ತು ಬೆಳೆಗಾರರ ಅಭಿಪ್ರಾಯ ಸಂಗ್ರಹಿಸಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.