ಹೆಚ್ಚಿದ ಗಾಳಿಯಬ್ಬರ: ಕಬ್ಬಿನಮನೆಯಲ್ಲಿ ರಸ್ತೆಗೆ ಮರಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಳೆ ಕಡಿಮೆಯಾಗಿದ್ದು, ಗಾಳಿಯ ಅಬ್ಬರ ಹೆಚ್ಚಾಗಿದೆ. ಹಲಸೂರು ಸಮೀಪದ ಕಬ್ಬಿನಮನೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಮಾಗುಂಡಿ-ಮಹಲ್ಗೋಡು ತೆರಳುವ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು. ಬಳಿಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.