ಕಾಫಿ ನಾಡಲ್ಲಿ ವರುಣನ ಆರ್ಭಟ: ಹಲವೆಡೆ ಜಲಾವೃತಚಿಕ್ಕಮಗಳೂರು, ಜಿಲ್ಲೆಯಲ್ಲಿ ವರುಣನ ಆರ್ಭಟ ಭಾನುವಾರವೂ ಮುಂದುವರೆದಿತ್ತು. ಮಲೆನಾಡು ಸೇರಿದಂತೆ ಬಯಲುಸೀಮೆಯಲ್ಲೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಬಂದಿದ್ದು ಜನಜೀವನ ಅಸ್ತವ್ಯಸ್ಥವಾಗಿತ್ತು. ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹಲವೆಡೆ ಹೊಲ, ಗದ್ದೆ, ತೋಟಗಳು ಜಲಾವೃತವಾಗಿವೆ. ಕಿರು ಸೇತುವೆಗಳು ಮುಳುಗಡೆಯಾಗಿದ್ದರಿಂದ ರಸ್ತೆ ಸಂಪರ್ಕ ಕಡಿದು ಹೋಗಿದೆ. ನಗರ ಪ್ರದೇಶಗಳಲ್ಲಿ ತೆರೆದ ಚರಂಡಿಗಳು ಭರ್ತಿಯಾದ ಪರಿಣಾಮ ರಸ್ತೆ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.