ಆನೆ ದೊಡ್ಡಿ ನಿರ್ಮಾಣದಿಂದ ಸಮಸ್ಯೆಗೆ ಶಾಶ್ವತ ಪರಿಹಾರ: ಕೋಟಾ ಶ್ರೀನಿವಾಸ ಪೂಜಾರಿಬಾಳೆಹೊನ್ನೂರು, ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಆನೆ ದಾಳಿಯಂತಹ ಗಂಭೀರ ಪ್ರಕರಣವನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಆನೆ ದೊಡ್ಡಿ ನಿರ್ಮಾಣ ಯೋಜನೆ ಕುರಿತು ಕೇಂದ್ರ ಅರಣ್ಯ ಸಚಿವರ ಬಳಿ ಪ್ರಸ್ತಾಪಿಸಿದ್ದು, ಈ ಯೋಜನೆ ಕಾರ್ಯಗತ ವಾದರೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.