ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ನ್ಯಾ. ದಾಸರಿ ಕ್ರಾಂತಿ ಕಿರಣ್ ಕರೆನರಸಿಂಹರಾಜಪುರ, ಸೇವೆ ಎಂಬುದು ಯಾವುದೇ ಸಂಭಾವನೆ ಪಡೆಯದೆ ನಿರ್ವಹಿಸುವ ಕಾರ್ಯ. ವಿದ್ಯಾರ್ಥಿಗಳು ಕಾಲೇಜು ದಿನಗಳಲ್ಲಿಯೇ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಕರೆ ನೀಡಿದರು. ಮಂಗಳವಾರ ಸಂಜೆ ತಾಲೂಕಿನ ಹೊನ್ನೆಕೂಡಿಗೆ ಗ್ರಾಮದಲ್ಲಿ ಆರಂಭವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.