ಶೃಂಗೇರಿ: ಗಾಂಧಿಮೈದಾನದ ತ್ಯಾಜ್ಯವೆಲ್ಲ ತುಂಗಾ ನದಿ ಮಡಿಲಿಗೆಶೃಂಗೇರಿ, ಇಲ್ಲಿ ಎಲ್ಲೆಲ್ಲೂ ತ್ಯಾಜ್ಯಗಳ ರಾಶಿ, ಪ್ಲಾಸ್ಟಿಕ್, ಕಸಕಡ್ಡಿಗಳು,ಇಡೀ ಪ್ರದೇಶವೇ ತ್ಯಾಜ್ಯಮಯವಾಗಿದೆ. ಸ್ವಚ್ಛತೆ ಎಂಬುದೇ ಕಂಡು ಬರುತ್ತಿಲ್ಲ. ಮಳೆ ಬಂದರೆ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಒಡಲಿಗೆ ಸೇರುತ್ತದೆ. ದಿನೇ ದಿನೇ ತ್ಯಾಜ್ಯ ಸಂಗ್ರಹ ಹೆಚ್ಚುತ್ತಲೇ ಇದೆ. ಮೈದಾನ ಪ್ರದೇಶವಲ್ಲದೇ ತುಂಗೆ ದಡದುದ್ದಕ್ಕೂ ರಾಶಿ ರಾಶಿ ತ್ಯಾಜ್ಯ ಸಂಗ್ರಹ.