ಸಮಾಜದ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅಪಾರ: ಪೂರ್ಣಿಮಾ ಸಿದ್ದಪ್ಪಶೃಂಗೇರಿ, ಮಹಿಳೆಯರು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿರದೇ ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ ತಮ್ಮದೇ ಆದ ಛಾಪು ಮೂಡಿಸಿ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಇನ್ನರ್ ವ್ಹೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಪೂರ್ಣಿಮಾ ಸಿದ್ದಪ್ಪ ಹೇಳಿದರು.