ಮತದಾನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕುಮತಾದನ ಮಾಡುವುದು ನಮ್ಮ ಹಕ್ಕಾಗಿದ್ದು ಪ್ರತಿಯೊಬ್ಬರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನ ಗೌಡ ಕರೆ ನೀಡಿದರು. ಬುಧವಾರ ಪಟ್ಟಣ ಪಂಚಾಯಿತಿ ಮುಂಭಾಗದ ರಸ್ತೆಯ ಸರ್ಕಲ್ ನಲ್ಲಿ ಪಪಂ ನಿಂದ ಆಯೋಜನೆ ಮಾಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾವಂತರಿಗಿಂತ ಅವಿದ್ಯಾವಂತರೇ ಹೆಚ್ಚು ಮತ ನೀಡುತ್ತಾರೆ. ಗ್ರಾಮೀಣ ಭಾಗದ ಜನರು ತಪ್ಪದೆ ಮತ ನೀಡುತ್ತಾರೆ. ಆದರೆ, ಪಟ್ಟಣದ ಜನರು ಮತದಾನದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದು ಸರಿಯಲ್ಲ ಎಂದರು.