ಸೈನಿಕರಿಗೆ ಆತ್ಮಸ್ಥೈರ್ಯ ತುಂಬದ ಕಾಂಗ್ರೆಸ್: ಕೋಟಾಅಂದು ಚೀನಾ ಗಡಿಯಲ್ಲಿ ಶಸ್ತ್ರಾಸ್ತ್ರ, ಮದ್ದು ಗುಂಡುಗಳಿಲ್ಲದೆ ಅಸಹಾಯಕರಾದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಿ ಸಹಕಾರ ನೀಡದ ಕಾಂಗ್ರೆಸ್ ಪಕ್ಷ ಇಂದು ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.