ಮಲೆನಾಡಿನಲ್ಲಿ ಮಳೆಯ ಅಬ್ಬರ: ಉಕ್ಕಿ ಹರಿದ ಜೀವನದಿಗಳುಚಿಕ್ಕಮಗಳೂರು, ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿ ಅಬ್ಬರಿಸುತ್ತಿರುವ ವರುಣನಿಂದ ಜೀವ ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿಗೆ ಮರಗಳು ಉರುಳಿ ಬಿದ್ದಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯಯ, ಕೆಲವೆಡೆ ಭೂ ಕುಸಿತವೂ ಉಂಟಾಗಿದೆ.