ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಚೇರಿಯಲ್ಲಿ ಧರಣಿ- ಪ್ರತಿಭಟನೆಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೆರೆ ಮರೆಯಲ್ಲಿ ಗೋ ಬ್ಯಾಕ್ ಶೋಭಾ ಎಂದು ಕರೆ ನೀಡಿದ್ದ ಬಿಜೆಪಿ ಮುಖಂಡರು ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ತೆರೆಯ ಮುಂದೆ ಭಾನುವಾರ ಆಕ್ರೋಶ ಹೊರ ಹಾಕಿದರು.