ಮಂಗನಕಾಯಿಲೆ: ಒಂದೇ ಗ್ರಾಪಂ ವ್ಯಾಪ್ತಿಯಲ್ಲಿ 18 ಪ್ರಕರಣ ಪತ್ತೆಜಿಲ್ಲೆಯ ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 18 ಪ್ರಕರಣಗಳು ಈ ಭಾಗದಲ್ಲಿ ಪತ್ತೆಯಾಗಿವೆ.ಕಳೆದ ವರ್ಷ ಕೊಪ್ಪ ತಾಲೂಕಿನಲ್ಲಿ ಕೇವಲ ಒಂದೇ ಒಂದು ಪ್ರಕರಣ ಮಾತ್ರ ಪತ್ತೆಯಾಗಿತ್ತು. ಆದರೆ, ಈ ಬಾರಿ ಜನವರಿಯಿಂದ ಈವರೆಗೆ 18 ಪ್ರಕರಣಗಳು ಪತ್ತೆಯಾಗಿವೆ. ಇಲ್ಲೊಂದು ಆತಂಕದ ವಿಷಯವೆಂದರೆ, ಬೇರುಕೊಡಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.