ತೆರಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಸಂಸದರು ಹಾಗೂ ನಾಯಕರು ಬುಧವಾರ ನಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.