ಜಿಲ್ಲೆಯ ಹಲವೆಡೆ ಹುತಾತ್ಮರ ದಿನಾಚರಣೆ, ಮೌನಾಚರಣೆಹುತಾತ್ಮರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಉದ್ಯಾನವನದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಹಾಗೂ ಪ್ರತಿಮೆಗೆ ಶಾಸಕ ಎಚ್.ಡಿ. ತಮ್ಮಯ್ಯ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್ ಪುಷ್ಪ ನಮನ ಸಲ್ಲಿಸಿ, ನಂತರ ಮೌನಾಚರಣೆ ಮಾಡಲಾಯಿತು. ಆಶಾಕಿರಣ ಅಂಧ ಮಕ್ಕಳ ಪಾಠ ಶಾಲೆ ವಿದ್ಯಾರ್ಥಿಗಳು ಗಾಂಧೀಜಿಯವರಿಗೆ ಪ್ರಿಯವಾದ ಗೀತೆಗಳನ್ನು ಹಾಡಿದರು.