ಹೋಂ ಸ್ಟೇಗಳ ಮೇಲೆ ಅಬಕಾರಿ ಇಲಾಖೆ ಹದ್ದಿನ ಕಣ್ಣುಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದೆ. ಆದರೆ, ಮದ್ಯ ಖರೀದಿಯಲ್ಲಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗುತ್ತಿಲ್ಲ. ಇದಕ್ಕೆ ಕಾರಣ ಏನು ? ಈ ಪ್ರಶ್ನೆಗೆ ಮದ್ಯ ವರ್ತಕರಲ್ಲಿ ಹಲವು ಸಾಲಿನ ಉತ್ತರಗಳಿವೆ.ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಿರುವ ಪ್ರವಾಸಿಗರು ಬರುವ ದಾರಿಯಲ್ಲಿಯೇ ಮದ್ಯ ತರುತ್ತಿದ್ದಾರೆ. ಅಲ್ಲದೆ, ಕೆಲವು ಹೋಂ ಸ್ಟೇಗಳಲ್ಲಿ ಗೋವಾ, ಮಹಾರಾಷ್ಟ್ರ ಹಾಗೂ ಮಿಲ್ಟ್ರಿ ಖೋಟಾದ ಮದ್ಯವನ್ನು ಪ್ರವಾಸಿಗರಿಗೆ ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಜಿಲ್ಲೆಯ ವೈನ್ ಸ್ಟೋರ್ಗಳಲ್ಲಿ ಮದ್ಯ ಖರೀದಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗುತ್ತಿಲ್ಲ.