ಕರಗಣೆ, ಕುಂಬ್ರುಮನೆಯಲ್ಲಿ ಕಾಡಾನೆ ಹಾವಳಿಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಪಂ ಹಾಗೂ ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಾವಳಿ ಮಿತಿ ಮೀರಿದ್ದು, ರೈತರ ಜಮೀನನ್ನು ಅಪಾರ ಪ್ರಮಾಣದಲ್ಲಿ ಹಾನಿ ಮಾಡುತ್ತಿವೆ.ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಕರಗಣೆ ಗ್ರಾಮದ ನವೀನ್, ಶಂಕರೇಗೌಡ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಕಾಡಾನೆ ರಾತ್ರಿ ವೇಳೆ ದಾಳಿ ನಡೆಸಿ ಅಡಕೆ, ಕಾಫಿ, ತೆಂಗು, ಬಾಳೆ ತೋಟಗಳನ್ನು ನಾಶ ಮಾಡುತ್ತಿವೆ. ರೈತರ ನೂರಾರು ಅಡಕೆ ಮರಗಳು ಧರೆಗುರುಳಿವೆ.