ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿದೆ: ಶಾಸಕ ಜಿ.ಎಚ್.ಶ್ರೀನಿವಾಸ್ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಜಿ.ಎಚ್.ಶ್ರೀನಿವಾಸ್ ಜನಹಿತ ಟ್ರಸ್ಟ್ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ, ಪೌಷ್ಠಿಕ ಆಹಾರ ಪ್ರಾತ್ಯಕ್ಷತೆಯಲ್ಲಿ ಶಾಸಕ ಜಿಎಚ್ ಶ್ರೀನಿವಾಸ್ ಮಾತನಾಡಿ ನಮ್ಮ ಹಿಂದಿನ ಶಾಸಕ ಅವಧಿಯಲ್ಲಿಯೂ ಸಾಕಷ್ಟು ಬಾರಿ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ. ಗರ್ಭಿಣಿ ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು. ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಯಂತಹ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.