ಸಾಮಾಜಿಕ ಭದ್ರತೆಗೆ ಚುನಾಯಿತ ಪ್ರತಿನಿಧಿಗಳು ಶ್ರಮಿಸಬೇಕು: ತಮ್ಮಯ್ಯನಗರದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು. ಅವರ ಭದ್ರತೆಗಾಗಿ ಸರ್ಕಾರ, ಚುನಾಯಿತ ಪ್ರತಿನಿಧಿಗಳು ಕೆಲಸ ಮಾಡಬೇಕು ಎಂದು ಹೇಳಿದರು.