ಬಿಸಿಯೂಟ ತಯಾರಿಕರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ರವೀಶ್ಬಿಸಿಯೂಟ ಅಡುಗೆ ತಯಾರಕರು ಹಾಗೂ ಸಹಾಯಕರು ಅಡುಗೆ ಸಿದ್ಧಪಡಿಸುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಗ್ಯಾಸ್ ಬಳಸುವಾಗ ಬೆಂಕಿ ಅವಘಡಗಳನ್ನು ತಪ್ಪಿಸುವ ಬಗ್ಗೆ ಮಾಹಿತಿ ತಿಳಿದು ಕೊಳ್ಳಬೇಕಾದ ಅಗತ್ಯ ಇದೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೆ ರೀತಿ ಅಪಘಾತ ಸಂಭವಿಸಿದಾಗ ಅದಕ್ಕೆ ಪ್ರಥಮಚಿಕಿತ್ಸೆ ನೀಡುವ ಮಾಹಿತಿ ಪಡೆಯಬೇಕು ಎಂದು ತರಬೇತಿ ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಹೇಳಿದರು.