ಶ್ರೀ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ: ಕುಮಾರಸ್ವಾಮಿಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರೊಂದಿಗೆ ವಾಸ್ತವ್ಯ ಹೂಡಿ ಗುರುವಾರ ಬೆಂಗಳೂರಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ. ಖುಷಿ ಇದೆ ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು, ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ