ದಾನಗಳಲ್ಲಿ ಅಂಗಾಂಗ ದಾನ ಶ್ರೇಷ್ಠವಾದುದು: ಎಚ್.ಡಿ. ತಮ್ಮಯ್ಯನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ, ನೇತ್ರದಾನ, ದೇಹದಾನ ನೋಂದಣಿ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತಮ್ಮಯ್ಯ ವಿದ್ಯಾದಾನ, ಅನ್ನದಾನವೇ ಶ್ರೇಷ್ಠವಾಗಿತ್ತು ಆದರೆ ಅದಕ್ಕೂ ಮಿಗಿಲಾದ ದಾನ ಅಂಗಾಂಗ ದಾನ. ಇದರಿಂದ ಇತರೆ ಜೀವಗಳು ಬೆಳಕನ್ನು ಕಾಣುತ್ತವೆ ಎಂದು ಹೇಳಿದರು.