ಅಭಯಾರಣ್ಯದ ಮರಗಳ ಹನನ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಭದ್ರಾ ಅಭಯಾರಣ್ಯದ ತಣಿಗೆಬೈಲಿನ ಗುಡ್ಡದ ಬೀರನಹಳ್ಳಿಯ ಗುರುಪುರ, ನಂದಿಬಟ್ಟಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಉಪಸ್ಥಿತಿಯಲ್ಲೆ ಬೆಲೆ ಬಾಳುವ ಮರಗಳ ಹನನವಾಗಿದ್ದು, ಇದರ ಹಿಂದೆ ಅರಣ್ಯ ಇಲಾಖೆಯ ಸಿಬ್ಬಂದಿ ಕೈವಾಡವೂ ಇದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡುವಂತೆ ಪರಿಸರಾಸಕ್ತರು ಆಗ್ರಹಿಸಿದ್ದಾರೆ.