ಮೂವರು ಅಂತರಾಷ್ಟ್ರೀಯ ಮನೆಗಳ್ಳರ ಬಂಧನಚಿಕ್ಕಮಗಳೂರು, ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ಅವರ ಪುತ್ರ ವೆಂಕಟೇಶ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಅಂತಾರಾಷ್ಟ್ರೀಯ ಮನೆಗಳ್ಳರನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಮಹಾರಾಷ್ಟ್ರ ಪೊಲೀಸರ ಸಹಕಾರದೊಂದಿಗೆ ಬಂಧಿಸಿರುವ ಚಿಕ್ಕಮಗಳೂರು ಪೊಲೀಸರು ₹1.75 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಮತ್ತು ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.