ಕೋವಿಡ್, ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ: ಡಿಸಿ ಮೀನಾ ನಾಗರಾಜ್ಕೋವಿಡ್ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ, ಜ್ವರ ಇದ್ರೆ, ಕೋವಿಡ್ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ಹೋಗಿ ಬಂದಿದ್ದರೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ಲೂ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ಸರ್ಕಾರದ ನಿರ್ದೇಶನದಂತೆ ಮುಂಜಾಗ್ರತೆ ತೆಗೆದುಕೊಳ್ಳಲಾಗುವುದು ಎಂದರು.