ಸಮಯ ಬರಲಿ ಎಲ್ಲಾ ಹೇಳ್ತೀನಿ: ಮಾಜಿ ಸಚಿವ ಸಿ.ಟಿ. ರವಿಮನದಲ್ಲಿ ಬಹಳ ಭಾವನೆಗಳಿವೆ, ಹೇಳೋಕು ಬಹಳ ಇದೆ. ಸಮಯ ಇದಲ್ಲ. ಸದ್ಯಕ್ಕೆ ರಾಷ್ಟ್ರದ ಹಿತಕ್ಕಾಗಿ ಮೋದಿ 3ನೇ ಬಾರಿ ಪ್ರಧಾನಿ ಆಗಬೇಕು ಅಷ್ಟೆ. ಪಕ್ಷ, ರಾಷ್ಟ್ರದ ಹಿತಕ್ಕಾಗಿ ಬಹಳ ವಿಷಯಗಳನ್ನ ನುಂಗಿಕೊಂಡಿದ್ದೇನೆ. ಬಹಳ ದಿನ ಹೊಟ್ಟೆಯಲ್ಲಿ ಇಟ್ಟುಕೊಳ್ಳಲು ಆಗಲ್ಲ, ಸಮಯ ಬರಲಿ ಎಲ್ಲಾ ಹೇಳ್ತೀನಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.