ಡಿಕೆಶಿ ಬ್ರದರ್ಸ್ ರಾಜೀನಾಮೆಗೆ ಬಿಜೆಪಿ ಆಗ್ರಹಪ್ರತ್ಯೇಕ ರಾಷ್ಟ್ರದ ಪ್ರಸ್ತಾಪ ಮಾಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಪಕ್ಷದ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಆಜಾದ್ ಪಾರ್ಕ್ ವೃತ್ತದಲ್ಲಿ ಡಿ.ಕೆ. ಸುರೇಶ್ ವಿರುದ್ಧ ಪ್ರತಿಭಟನೆ ನಡೆಸಿ ಇದೇ ವೇಳೆಯಲ್ಲಿ ಅವರ ಭಾವಚಿತ್ರ ಇರುವ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.