ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಡಿಸಿ ಮೀನಾ ನಾಗರಾಜ್ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಸೂಚಿಸಿದರು.