• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಟುಂಬದ ಹಿತಕ್ಕಾಗಿ ಬೈಕ್‌ ಸವಾರರು ಹೆಲ್ಮೆಟ್‌ ಧರಿಸಬೇಕು: ನಿರಂಜನಗೌಡ
ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯಕ್ಕಿಂತಲೂ ಕುಟುಂಬದ ಒಳಿತಿಗಾಗಿ ಹೆಲ್ಮೆಟ್ ಧರಿಸಿ ಚಾಲನೆ ಮಾಡಬೇಕು,ಅಪಘಾತ ಸಂಭವಿಸುವುದು ಆಕಸ್ಮಿಕವಾದರೂ ವಾಹನ ಚಾಲನೆಯಲ್ಲಿ ಪಾಲನೆ ಮಾಡಬೇಕಾದ ನಿಯಮಗಳ ಬಗ್ಗೆ ಅರಿವು ಮೂಡಿಸಿ ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶ ಹೊಂದಿದ್ದೇವೆ. ಪ್ರತಿಯೊಬ್ಬರು ಬೈಕ್ ಚಾಲನೆ ಮಾಡುವಾಗ ಕಡ್ಡಾಯ ವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನಿರಂಜನಗೌಡ ಹೇಳಿದರು.
ಗುಣ ಮಟ್ಟದ ಕಾಮಗಾರಿ ನಿರ್ವಹಿಸಲು ಶಾಸಕ ಟಿ.ಡಿ.ರಾಜೇಗೌಡ ಸೂಚನೆ
ನರಸಿಂಹರಾಜಪುರ ಗುಬ್ಬಿಗಾ ಗ್ರಾಮ ಪಂಚಾಯಿತಿ ನೇತ್ಕಲ್‌ ನಲ್ಲಿ ಜೆಜೆಎಂ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಶುದ್ದ ಕುಡಿಯುವ ನೀರಿನ ಯೋಜನೆಯಾದ ಜೆಜೆಎಂ ಕಾಮಗಾರಿಯನ್ನು ಉತ್ತಮ ಗುಣ ಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದರು.
ಪ್ರಪಾತಕ್ಕೆ ಉರುಳಿದ ಟಿಪ್ಪರ್: ಚಾಲಕ ಪಾರು
ಮೂಡಿಗೆರೆಯಿಂದ ಚಾರ್ಮಾಡಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಶನಿವಾರ ಮುಂಜಾನೆ ನಸುಕಿನಲ್ಲಿ ಮಂಜುಕವಿದ ವಾತಾವರಣದಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸುಮಾರ ಎರಡು ಸಾವಿರ ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರ್ಮಿಕ ವಿರೋಧಿ ನೀತಿ ಪ್ರತಿರೋಧಿಸಿ ಫೆ. 1 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ
ಫೆ.1 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ ಮತ್ತು ಬಹಿರಂಗ ಆಯೋಜಿಸಲಾಗಿದೆ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದ್ದಾರೆ.
ಚೌಳಹಿರಿಯೂರಿನಲ್ಲಿ ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೆ
ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರಿನಲ್ಲಿ ವಿಷ್ಣು ಸೇನಾ ಸಮಿತಿಯಿಂದ ಆಯೋಜಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಈ14ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ವಕೀಲ ಲಯನ್ ರವಿಕುಮಾರ್ ಉದ್ಘಾಟಿಸಿದರು.
ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಿ: ಪುರಸಭೆ ಅಧ್ಯಕ್ಷ ಪರಮೇಶ್
ಪುರಸಭೆ ಕಾರ್ಯಾಲಯದಿಂದ ವಾರದ ಸಂತೆ ಮತ್ತು ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುಮಾರು 83 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡಿರುವ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಪರಮೇಶ್‌ ಅಂಗಡಿಗಳಿಗೆ ಹೋಗುವಾಗ ಮನೆಯಿಂದಲೇ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ಕ್ಷಣಿಕ ಸುಖಕ್ಕೆ ಕಲಿತ ದುಶ್ಚಟಗಳು ಜೀವನಕ್ಕೆ ಮಾರಕ: ಅರವಿಂದ ಸೋಮಯಾಜಿ
ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ಜನ ಜಾಗೃತಿ ವೇದಿಕೆ ಹಾಗೂ ರಾಷ್ಟೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅರವಿಂದ ಸೋಮಯಾಜಿ ಕ್ಷಣಿಕ ಸುಖಕ್ಕಾಗಿ ಕಲಿತ ದುಶ್ಚಟಗಳು ಜೀವನ ಪರ್ಯಂತ ನಮ್ಮ ಜೊತೆಯಲ್ಲೇ ಇರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರಬೇಕು ಎಂದು ಹೇಳಿದರು.
ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಿದರೆ ಉತ್ತಮ ಭವಿಷ್ಯ: ತಮ್ಮಯ್ಯ
ಚಿಕ್ಕಮಗಳೂರು ನಗರದ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್‌.ಡಿ. ತಮ್ಮಯ್ಯವಿದ್ಯಾರ್ಥಿಗಳು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿದರೆ ಮುಂದಿನ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಸಾಗುವಾನಿ, ಹೊನ್ನೆ ಮರಗಳು ಆಕಸ್ಮಿಕ ಬೆಂಕಿಗೆ ಆಹುತಿ
ನರಸಿಂಹರಾಜಪುರ ಪಟ್ಟಣದ ಪ್ರವಾಸಿ ಮಂದಿರ ಸರ್ಕಲ್ ಬಳಿ ಕೂಡಿಟ್ಟಿದ್ದ ಸಾಗುವಾನಿ, ಹಲಸು, ಹೊನ್ನೆ ನಾಟದ ತುಂಡುಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಟ್ಟು ಹೋಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ. ಪಟ್ಟಣ ಪಂಚಾಯಿತಿ ಸದಸ್ಯ, ಜಿ.ಪಿ.ಟಿಂಬರ್ ಮಾಲೀಕ ಮುನಾವರ್ ಪಾಷಾ ಸಮೀಪದ ಜೆ.ಕೆ.ಶಾಮೀಲ್ ಮಿಲ್ಲಿನ ಪಕ್ಕದ ಜಾಗದಲ್ಲಿ ಸಾಗುವಾನಿ, ಹಲಸು ಹಾಗೂ ಹೊನ್ನೆ ನಾಟವನ್ನು ಸಂಗ್ರಹಿಸಿದ್ದರು.
ವಿವಿಧ ಸುರಕ್ಷತಾ ಪರಿಕರ ಬಳಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ
ಪುರಸಭೆ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣಾ ಸಮಾರಂಭದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವಾಗ ವಿವಿಧ ರೀತಿ ತ್ಯಾಜ್ಯ , ಅಪಾಯಕಾರಿ ತ್ಯಾಜ್ಯ ವಸ್ತುಗಳು ಇರುತ್ತವೆ, ಆದುದರಿಂದ ಪೌರಕಾರ್ಮಿಕರು ಕೈಗಳಿಗೆ ಸುರಕ್ಷಿತವಾದ ಹ್ಯಾಂಡ್ ಗ್ಲೌಸ್ ಹಾಕಿ, ಗಮ್ ಬೂಟ್ಸ್, ಹೆಲ್ಮಟ್ ಧರಿಸಬೇಕು ಬಳಸಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved