ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.