ಸರಣಿ ರಜೆ, ಕಾಫಿ ನಾಡಿನಲ್ಲಿ ಪ್ರವಾಸಿಗರ ದಂಡುಚಿಕ್ಕಮಗಳೂರು, ಕ್ರಿಸ್‌ಮಸ್, ಹೊಸ ವರ್ಷಾಚರಣೆ ಹಾಗೂ ಸರಣಿ ರಜೆಗಳಿಂದಾಗಿ ಕಾಫಿ ನಾಡು ಚಿಕ್ಕಮಗಳೂರು ಪ್ರವಾಸಿಗರಿಂದ ತುಂಬಿ ತುಳುಕಾಡುತ್ತಿದೆ. ಪಶ್ಚಿಮಘಟ್ಟದ ತಪ್ಪಿನಲ್ಲಿರುವ ಚಿಕ್ಕಮಗಳೂರಿನ ಗಿರಿ ಪ್ರದೇಶಗಳಲ್ಲಿರುವ ಪ್ರವಾಸಿ ತಾಣಗಳು ಹೊಸ ವರ್ಷಾಚರಣೆಯ ಹಾಟ್ ಸ್ಪಾಟ್. ಕಳೆದ ಎರಡು ದಿನಗಳಿಂದ ಜಿಲ್ಲೆಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಆಗಾಗ ಟ್ರಾಫಿಕ್ ಜಾಮ್ ಆಗುತ್ತಿತ್ತು. ನಗರ ಮತ್ತು ಪಟ್ಟಣ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು.