ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು

| Published : Apr 15 2024, 01:17 AM IST

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಎನ್.ಆರ್.ಪುರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಅನೇಕ ಯುವಕರು ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.‌ ಶೃಂಗೇರಿಯಲ್ಲೂ ಹಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.

ಕನ್ನಡಪ್ರಭ ವಾರ್ತೆ ಎನ್.ಆರ್.ಪುರ

ದೇಶಾದ್ಯಂತ ಬದಲಾವಣೆಯ ಅಲೆ ಆವರಿಸಿದ್ದು, ಅನೇಕ ಯುವಕರು ಕಾಂಗ್ರೆಸ್ ಪಕ್ಷದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಇದು ರಾಜ್ಯದಲ್ಲೂ ಕಂಡು ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಬೇಸತ್ತ ಯುವಕರು ಇನ್ನು ಭವಿಷ್ಯವಿದ್ದರೆ ಅದು ಕಾಂಗ್ರೆಸ್‌ನಲ್ಲಿ ಮಾತ್ರ ಎಂದು ಕಾಂಗ್ರೆಸ್ ಪಕ್ಷವನ್ನು ಸೇರುವುದು ನಿರಂತರವಾಗಿ ಕಂಡುಬರುತ್ತಿದೆ.

ಶನಿವಾರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಎನ್.ಆರ್.ಪುರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಅನೇಕ ಯುವಕರು ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.‌ ಶೃಂಗೇರಿಯಲ್ಲೂ ಹಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.

ಕೊರೋನಾ ಕಾಲದಲ್ಲಿ ನಮಗೆ ನೆರವು ನೀಡಿದ್ದು ಜಯಪ್ರಕಾಶ್ ಹೆಗ್ಡೆ, ಬರೇ 20 ತಿಂಗಳು ಸಂಸದರಾಗಿದ್ದರೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಆ ಬಳಿಕವೂ ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು ನೋವು ನಲಿವಿಗೆ ಸ್ಪಂದಿಸುತ್ತಿದ್ದಾರೆ. ಜೆಪಿ ಅವರ ಈ ಆದರ್ಶ ಯುವಕರಲ್ಲಿ ಸ್ಫೂರ್ತಿಯನ್ನುಂಟು ಮಾಡಿದೆ. ಅವರ ಜಯವೇ ನಮ್ಮ ಗುರಿ ಎಂದು ಶಾಸಕ ರಾಜೇಗೌಡ ಹೇಳಿದರು.