5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ತಲುಪಿಸುವ ಗುರಿ ಹೊಂದಲಾಗಿದೆ

ಕುಕನೂರು: ಮಕ್ಕಳ ರಕ್ಷಣೆ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು ಎಂದು ಗ್ರಾಮದ ಮುಖಂಡ ಮಂಜುನಾಥ ಗಟ್ಟೆಪ್ಪನವರ್ ಹೇಳಿದರು.

ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಜರುಗಿದ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ತಲುಪಿಸುವ ಗುರಿ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕತೆಯರು, ಪೋಷಕರು ಎಲ್ಲರು ಸಕ್ರಿಯವಾಗಿ ಪಾಲ್ಗೊಂಡು ಮನೆ ಮನೆಗೆ ಜಾಗೃತಿ ಮೂಡಿಸಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವುದು ಅನಿವಾರ್ಯ ಎಂದರು.

ಪ್ರಮುಖರಾದ ಬಸಪ್ಪ ದೊಡ್ಡಮನಿ, ಗ್ರಾಪಂ ಸದಸ್ಯ ಮಾಬುಸಾಬ ಮಕಾಂದರ್, ಸುಭಾಷ್ ಈಳಗೇರ, ಯಮನಪ್ಪ ಉಚ್ಚಲಕುಂಟಿ, ಫಕೀರಪ್ಪ ಮಂಗಳೂರು, ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಅಂಗನವಾಡಿ ಸಹಾಯಕಿಯರಿದ್ದರು.