ಸಾರಾಂಶ
ರಾಮನಗರ: ಶಿಕ್ಷಣ ಒಂದು ಶಕ್ತಿ. ಜ್ಞಾನ ಬಲದಿಂದ ಮಾತ್ರ ಸಾಮಾಜಿಕ ಪಿಡುಗುಗಳನ್ನು ನಿವಾರಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್.ಸವಿತಾ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ)ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರೆ ಸಾಲದು, ಅಂತಹ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗುತ್ತದೆ. 14 ವರ್ಷದೊಳಗಿನ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿತಕ್ಕೆ ಬಳಸುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.
ಬಾಲಕಾರ್ಮಿಕ ಪದ್ದತಿಯನ್ನ ಬೇರು ಸಮೇತ ನಿರ್ಮೂಲನೆ ಮಾಡುವ ದಿಸೆಯಲ್ಲಿ ಸಂಘ ಸಂಸ್ಥೆಗಳು, ಸಮುದಾಯಗಳು ಸೇರಿದಂತೆ ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ಪ್ರಸನ್ನಕುಮಾರ್ ತಿಳಿಸಿದರು.ಬಾಲ ಕಾರ್ಮಿಕರು ಕಂಡುಬಂದಲ್ಲಿ 1098 ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸತೀಶ್ ಹೇಳಿದರು. ಅಪ್ಸ ಸಂಸ್ಥೆಯ ಎನ್‌ಜಿಒ ಸದಸ್ಯರಾದ ಲಕ್ಷೀ ಪ್ರಸನ್ನರವರು ವಿದ್ಯಾಥಿಗಳಿಗೆ ಉಪನ್ಯಾಸ ನೀಡದರು. ಜಯಪಾಲ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರಜನಿ ಆರ್ ಮತ್ತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.13ಕೆಆರ್ ಎಂಎನ್ 1.ಜೆಪಿಜಿರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ)ದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ಉದ್ಘಾಟಿಸಿದರು.