ಸಾರಾಂಶ
ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ ನಡೆಯಿತು. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲ ಕಾರ್ಮಿಕರ ತಪಾಸಣೆ ನಡೆಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ ಪಟ್ಟಣದಲ್ಲಿ ಸೋಮವಾರ ನಡೆಯಿತು.ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಜಾಥಾಕ್ಕೆ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳು ಹಾಗು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಚಾಲನೆ ನೀಡಿದರು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲ ಕಾರ್ಮಿಕರ ತಪಾಸಣೆಯನ್ನು ನಡೆಸಲಾಯಿತು. ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್ ವಿಠಲ್, ಹಿರಿಯ ಕಾರ್ಮಿಕ ಅಧಿಕಾರಿ ಶಶಿಧರ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸ್ವಾಮಿ, ಕ್ಷೇತ್ರ ಸಮನ್ವಯಧಿಕಾರಿಗಳಾದ ಮಂಜೇಶ್ ಇದ್ದರು.