ಸಾರಾಂಶ
ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು
ಸಿಂಧನೂರು: ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಬಾಲಕರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಮತಾಶರ್ಮ ಹೇಳಿದರು.
ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಮೌಲಾನ ಆಜಾದ್ ಮಾದರಿ ಶಾಲೆ, ಸರ್ಕಾರಿ ಬಾಲಕರ ಪ್ರೌಢಶಾಲೆ, ಅಗಸ್ತ್ಯ ಫೌಂಡೇಷನ್‌ನಿಂದ ಹಾಗೂ ವಿಜ್ಞಾನ ಕೇಂದ್ರ ಪಿಡಬ್ಲೂಡಿ ಕ್ಯಾಂಪ್ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಜ್ಞಾನ ಇಂದು ಆಗಸಕ್ಕೇರಿದೆ. ಪ್ರತಿ ಹಂತದಲ್ಲೂ, ಪ್ರತಿ ಕ್ಷೇತ್ರದಲ್ಲೂ ವಿಜ್ಞಾನ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳ ಅಧ್ಯಯನ ಹೆಚ್ಚಿಸಿಕೊಳ್ಳಬೇಕು ಎಂದರು.ಅಗಸ್ತ್ಯ ಫೌಂಡೇಶನ್ ಕೇಂದ್ರದ ಮುಖ್ಯಸ್ಥ ಶಿವಗ್ಯಾನಪ್ಪ ಕೋಮನೂರು, ವಿಜ್ಞಾನ ಶಿಕ್ಷಕ ಬಸವರಾಜ, ಶಿಕ್ಷಕರಾದ ಖಾಜಬನ್ನಿ ರೇಷ್ಮಾ, ಮೇಘಶಾಮ್ ಕಮ್ಮಾರ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜ್ಞಾನ ವಸ್ತು ಪ್ರದರ್ಶನ: ನಂತರ ಶಾಲಾ ಮಕ್ಕಳಿಂದ ವಿವಿಧ ಮಾದರಿಗಳ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ವಿಜ್ಞಾನದ ವಿವಿಧ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಪಾಲಕರಿಗೆ ಹಾಗೂ ವಸ್ತು ಪ್ರದರ್ಶನ ವೀಕ್ಷಿಸಲು ಬಂದ ವಿದ್ಯಾರ್ಥಿಗಳಿಗೆ ವಿವರಿಸಿದರು.