ಮಕ್ಕಳಿಗೂ ಕಾನೂನು ಅರಿವು ಅಗತ್ಯ

| Published : Nov 16 2024, 12:35 AM IST

ಸಾರಾಂಶ

ಹೊಸಕೋಟೆ: ಭಾರತ ಸಂವಿಧಾನದಲ್ಲಿ ಮಕ್ಕಳಿಗೂ ಕಾನೂನು ರಚಿಸಲಾಗಿದ್ದು, ಪ್ರತಿಯೊಬ್ಬರೂ ಮಾಹಿತಿ ಅರಿಯಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ತಿಳಿಸಿದರು.

ಹೊಸಕೋಟೆ: ಭಾರತ ಸಂವಿಧಾನದಲ್ಲಿ ಮಕ್ಕಳಿಗೂ ಕಾನೂನು ರಚಿಸಲಾಗಿದ್ದು, ಪ್ರತಿಯೊಬ್ಬರೂ ಮಾಹಿತಿ ಅರಿಯಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ತಿಳಿಸಿದರು.

ನಗರದ ಎಂವಿ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ವಕೀಲರ ಸಂಘ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಪ್ರತಿಮಗುವಿಗೆ ೬ ವರ್ಷದಿಂದ ೧೬ ವರ್ಷದವರೆಗೆ ಕಡ್ಡಾಯ ಶಿಕ್ಷಣ, ಪೌಷ್ಟಿಕ ಆಹಾರ, ಬಾಲ್ಯ ವಿವಾಹ ನಿಷೇದ, ಬಾಲ ಕಾರ್ಮಿಕ, ಜೀತ ಪದ್ಧತಿಗಳ ನಿಷೇಧ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಂತಹ ಮಹತ್ವದ ಕಾನೂನುಗಳನ್ನು ರಚಿಸಲಾಗಿದೆ ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚೈತ್ರ ಕುಲಕರ್ಣಿ ಮಾತನಾಡಿ, ಮಕ್ಕಳಿಗೆ ಕಾನೂನು ಮೌಲ್ಯಗಳ ಜೊತೆ ನೈತಿಕ ಮೌಲ್ಯಗಳನ್ನು ಪೋಷಕರು ಹಾಗೂ ಶಿಕ್ಷಕರು ತಿಳಿಸಬೇಕಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಟಸ್ವಾಮಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ತಿಳಿಸಬಹುದು. ದೂರನ್ನು ಆಧರಿಸಿ ಪೊಲೀಸರು, ಶಿಕ್ಷಣ ಇಲಾಖೆ, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ನಿರ್ಮಲಾಕುಮಾರ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಖಜಾಂಚಿ ರವಿಕುಮಾರ್, ಬಿಇಒ ಪದ್ಮನಾಬ್‌, ಲಯನ್ಸ್ ಮಾಜಿ ಅಧ್ಯಕ್ಷ ಮಹೇಶ್, ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ, ಶಿಕ್ಷಕ ವೆಂಕಟೇಶ್, ಬಿಆರ್‌ಪಿ ಮಮತಾ ಹಾಜರಿದ್ದರು.

ಫೋಟೋ: 15 ಹೆಚ್‌ಎಸ್‌ಕೆ 1

ಹೊಸಕೋಟೆಯ ಎಂವಿ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್‌ ಉದ್ಘಾಟಿಸಿದರು.