ಸಾರಾಂಶ
ಕನ್ನಡಪ್ರಭ ವಾರ್ತೆ ಬೆಟ್ಟದಪುರಮಕ್ಕಳು ನಮ್ಮ ದೇಶದ ಭವಿಷ್ಯ, ಅವರ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದ ಅಕ್ಷರ ದಾಸೋಹ ನಿರ್ದೇಶಕ ಪ್ರಶಾಂತ್ ಹೇಳಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಒಂದು ಶಾಲೆಯು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾದ ಅನೇಕ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು. ಈ ಸೌಕರ್ಯಗಳು ಮಕ್ಕಳ ಶೈಕ್ಷಣಿಕ ಪ್ರಗತಿ, ಆರೋಗ್ಯ ಮತ್ತು ಸುರಕ್ಷತೆಯನ್ನು ಸಮತೋಲನಗೊಳಿಸಲು ಸಾಧ್ಯವಾಗುತ್ತದೆ, ಹಾಗೆ ಇಲಾಖಾ ವತಿಯಿಂದ ಶಾಲೆಗೆ ಆಗಬೇಕಾದ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಪಿಡಿಒ ಮಂಜುನಾಥ್ ಮಾತನಾಡಿ, ಶಾಲಾ ಆವರಣದ ಸುತ್ತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಸ್ಯೆಗಳಿದ್ದರೆ ತಕ್ಷಣದಲ್ಲಿ ಗಮನಕ್ಕೆ ತರುವಂತೆ ಹೇಳಿದರು.ಮಕ್ಕಳ ದಿನಾಚರಣೆ ಅಂಗವಾಗಿ ಪಂಚಾಯಿತಿ ವತಿಯಿಂದ ಮಕ್ಕಳಿಗೆ ಸಿಹಿ ವಿತರಿಸಿ ಶುಭ ಕೋರಲಾಯಿತು. ಗ್ರಾಪಂ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಶಾಲೆಗಳ ಅಭಿವೃದ್ಧಿಗೆ ಗ್ರಾಪಂಯಿಂದ ಹೆಚ್ಚಿನ ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸುವುದಾಗಿ ತಿಳಿಸಿದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಉಪಾಧ್ಯಕ್ಷ ಲಕ್ಷ್ಮಿ, ಸಿಬ್ಬಂದಿ ಪಾಂಡು, ಶ್ರೀನಿಧಿ, ದೇವರಾಜ್, ದೀಪು, ಮುಬೀನಾ, ಮೈಲಾರಿ ಮುಖ್ಯ ಶಿಕ್ಷಕ ಸುರೇಶ್ ಹಾಗೂ ಶಿಕ್ಷಕರು ಇದ್ದರು.
;Resize=(128,128))
;Resize=(128,128))
;Resize=(128,128))