ಸಾರಾಂಶ
ಹೊಸಕೋಟೆ: ಮಕ್ಕಳಿಗೆ ಪ್ರಥಮ ಅಕ್ಷರವನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ, ಶಿಕ್ಷಣದ ಜೊತೆಗೆ ಸದೃಢ ಸಮಾಜ ನಿರ್ಮಾಣಕ್ಕೆ ಆಧಾರ ಸ್ತಂಭಗಳು ಎಂದು ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ತಿಳಿಸಿದರು.
ನಗರದ ಮೇಧಾಶ್ರೀ ಒಲಿಂಪಿಯಾಡ್ ಶಾಲೆ ಆವರಣದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಉನ್ನತಿಯ ಆಧಾರಸ್ತಂಭಗಳಿದ್ದಂತೆ. ಮಣ್ಣಿನ ಮುದ್ದೆಯಂತಹ ಮಕ್ಕಳಿಗೆ ಮೊದಲ ಅಕ್ಷರಭ್ಯಾಸ ಮಾಡಿಸುವ ಮೂಲಕ ಸಮಾಜಕ್ಕೆ ಸತ್ಪ್ರಜೆಗಳ ಕೊಡುಗೆ ನೀಡುತ್ತಾರೆ. ಅಲ್ಲದೆ, ಗರ್ಭಿಣಿ, ಬಾಣಂತಿಯರನ್ನು ಪ್ರತಿ ಹಂತದಲ್ಲಿ ಆರೈಕೆ ಮಾಡುವ ದೊಡ್ಡ ಜವಾಬ್ದಾರಿ ಹೊತ್ತು ಅವರು ನಿರ್ವಹಿಸುವ ಕೆಲಸ ಪ್ರಶಂಸನೀಯ. ಸರ್ಕಾರ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ಅವರ ಕಠಿಣ ಶ್ರಮ, ಕಡಮೆ ವೇತನವನ್ನು ಗಮನಿಸಿ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಎಂದರು. ಮೇಧಶ್ರೀ ಶಾಲೆಯ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ನಿತ್ಯ ಮಕ್ಕಳ ಆರೈಕೆ ಜೊತೆಗೆ ಸರ್ಕಾರ ನೀಡುವ ಹಲವಾರು ಜವಾಬ್ದಾರಿಗಳನ್ನು ಹೊತ್ತು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಾರೆ. ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅವರಿಗಾಗಿ ಕ್ರೀಡಾಕೂಟ ಆಯೋಜನೆ ಮಾಡಿ ಅವರ ಕೆಲಸಕಾರ್ಯಗಳಿಗೆ ಉತ್ತೇಜನ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಸ್.ಸಿ.ಮಂಜುನಾಥ್ ಮಾತನಾಡಿ, ಕೊರೋನಾ ಸಾಂಕ್ರಾಮಿಕದ ವೇಳೆ ಸೇರಿದಂತೆ ಪ್ರತಿ ಚುನಾವಣೆ ಸಂದರ್ಭದಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಜವಾಬ್ದಾರಿ ಹೊತ್ತು ಕಠಿಣ ಶ್ರಮವಹಿಸಿ ಕೆಲಸ ಮಾಡುತ್ತಾರೆ. ಕಡಿಮೆ ವೇತನ, ಹೆಚ್ಚು ಕೆಲಸ ಮಾಡುವ ಅಂಗನವಾಡಿ ನೌಕರರನ್ನು ಸರ್ಕಾರ ಗುರುತಿಸಿ ಅವರಿಗೆ ಹೆಚ್ಚಿನ ಭತ್ಯೆ ಜೊತಗೆ ವೇತನ ಹೆಚ್ಚಳ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಜಿ.ಶ್ರೀನಿವಾಸ್, ಅಧ್ಯಕ್ಷ ಎಸ್.ಸಿ ಮಂಜುನಾಥ್, ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಖಜಾಂಚಿ ಮಹೇಶ್ ಆರಾದ್ಯ, ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ, ಮೇಧಶ್ರೀ ಶಾಲೆ ಕಾರ್ಯದರ್ಶಿ ಅಶ್ವತ್ಥನಾರಾಯಣ, ಖಜಾಂಚಿ ಭೀರಪ್ಪ, ವಕೀಲ ಕೃಷ್ಣಪ್ಪ ಸೇರಿದಂತೆ ಹಲ ಗಣ್ಯರು ಹಾಜರಿದ್ದರು.ಬಾಕ್ಸ್ .............
ಸರ್ಕಾರ ಬೇಡಿಕೆ ಈಡೇರಿಸಲಿಅಂಗನವಾಡಿ ಕಾರ್ಯಕರ್ತೆಯರು ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ತಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಕೂಡ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು. ಸರ್ಕಾರ ಅವರನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ. ಸಮಾಜಕ್ಕೆ ಅವರು ನೀಡುತ್ತಿರುವ ಕೊಡುಗೆ ಅಮೂಲ್ಯವಾಗಿದ್ದು ಅವರ ಸೇವೆಗೆ ಬೆಲೆ ಕೊಡಬೇಕು ಎಂದು ಹೊಸಕೋಟೆ ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಗೌರವಾಧ್ಯಕ್ಷ ಡಾ.ಜಿ.ಶ್ರೀನಿವಾಸ್ ಸರ್ಕಾರವನ್ನು ಒತ್ತಾಯಿಸಿದರು.
ಫೋಟೋ : 2 ಹೆಚ್‌ಎಸ್‌ಕೆ 2ಹೊಸಕೋಟೆಯ ಮೇಧಾಶ್ರೀ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ವಿಜೇತರಿಗೆ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಡಾ.ಜಿ.ಶ್ರೀನಿವಾಸ್, ಮೇಧಾಶ್ರೀ ಶಾಲೆ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಬಹುಮಾನ ವಿತರಿಸಿದರು.