ಸಾರಾಂಶ
ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯಾದ್ಯಂತ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವ ಹಿನ್ನೆಲೆ ಮೆಣಸಗಿ ಹಾಗೂ ಹೊಳೆಮಣ್ಣೂರ ಗ್ರಾಪಂ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಾಳಿಪಟ ತಯಾರಿಕೆ ಹಾಗೂ ಹಾರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ನೆರೆಯ ಹೊಳೆಮಣ್ಣೂರು ಹಾಗೂ ಮೆಣಸಗಿ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಉತ್ಸಾಹ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಇಚ್ಛಾಶಕ್ತಿಯಿಂದಾಗಿ ಇಲ್ಲಿಯ 500ಕ್ಕೂ ಹೆಚ್ಚು ಮಕ್ಕಳು ಸ್ವತಃ ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ಹೊಳೆಆಲೂರ

ಗಾಳಿಪಟ ತಯಾರಿಸಿ ಹಾರಿಸುವುದನ್ನು ಕಂಡು ಪಾಲಕರು ಪೋಷಕರು ತಮ್ಮ ಬಾಲ್ಯ ನೆನಪಿಸಿಕೊಂಡು ಮಕ್ಕಳಿಗೂ ಇಂತಹ ಅವಕಾಶ ಒದಗಿಸಿರುವ ಗ್ರಾಪಂ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ತಾವು ಕೂಡ ಮಕ್ಕಳಿಗೆ ಗಾಳಿಪಟ ತಯಾರಿಸುವಲ್ಲಿ ನೆರವಾಗಿದ್ದಾರೆ. ಎಲ್ಲ ಶಾಲೆಯ ಮುಖ್ಯೋಪಾಧ್ಯಾಯರ ಉತ್ತಮವಾಗಿ ಗಾಳಿಪಟ ತಯಾರಿಸಿ ಹಾರಿಸಿದ ವಿದ್ಯಾರ್ಥಿಗಳ ಪೈಕಿ ತರಗತಿವಾರು ಪ್ರಥಮ ದ್ವಿತೀಯ ದ್ವಿತೀಯ ಹಾಗೂ ಸಮಾಧಾನಕರ ಬಹುಮಾನಕ್ಕಾಗಿ ವಿದ್ಯಾರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು ಬಹುಮಾನ ಪಡೆಯಲಿರುವ ಮಕ್ಕಳ ಸಂಖ್ಯೆಯೇ 100 ದಾಟಿದೆ.ಗ್ರಾಮೀಣ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವ ಈ ದಿನಮಾನಗಳಲ್ಲಿ ನಮ್ಮ ಗ್ರಾಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳಿಗೆ ಗಾಳಿಪಟ ತಯಾರಿಸುವ ತರಬೇತಿ ನೀಡಿ ಅಗತ್ಯ ಪರಿಕರ ಒದಗಿಸುವ ಮೂಲಕ ಮಕ್ಕಳು ವಿನೂತನವಾಗಿ ಯೋಚಿಸುವಂತೆ ಸಂಭ್ರಮಿಸುವಂತೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೊಳೆಮಣ್ಣೂರ ಗ್ರಾಪಂ ಅಧ್ಯಕ್ಷೆ ಸುಜಾತ ಮಠಪತಿ ಹಾಗೂ ಮೆಣಸಗಿ ಗ್ರಾಪಂ ಅಧ್ಯಕ್ಷ ಈಶ್ವರಗೌಡ ಮುದೇನೂರು ತಿಳಿಸಿದ್ದಾರೆ.