ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ

| Published : Feb 23 2024, 01:53 AM IST

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ
Share this Article
  • FB
  • TW
  • Linkdin
  • Email

ಸಾರಾಂಶ

ಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.

ಕನ್ನಡಪ್ರಭ ವಾರ್ತೆ ಬೀದರ್‌

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಅಗತ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣ ಸಾಳೆ ಹೇಳಿದರು.

ಇಲ್ಲಿನ ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಗುರುವಾರ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಮಾಡಿದರು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಪಾಲಕರು, ಗುರು ಹಾಗೂ ಹಿರಿಯರನ್ನು ಸದಾ ಗೌರವಿಸಬೇಕು ಎಂದು ಸಲಹೆ ನೀಡಿದರು.

ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ಅರುಣೋದಯ ಶಾಲೆಯು ಶಿಕ್ಷಣದ ಜತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನೂ ಬೆಳೆಸಲು ಶ್ರಮಿಸುತ್ತಿದೆ ಎಂದು ತಿಳಿಸಿದರು.

1 ರಿಂದ 10ನೇ ತರಗತಿ ವರೆಗಿನ ಮಕ್ಕಳು ತಂದೆ-ತಾಯಿ ಪಾದಕ್ಕೆ ಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.

ವೇದಾಂತ ಯೋಗ ಸೇವಾ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ಪಾಟೀಲ, ಕಾರ್ಯದರ್ಶಿ ಡಾ. ಸುರೇಂದ್ರ, ಸದಸ್ಯ ಶರಣು ಬಿರಾದಾರ, ಸುನೀಲ್ ಗೌಳಿ, ಮುಖ್ಯಶಿಕ್ಷಕರಾದ ಈಶ್ವರಿ ಬೇಲೂರೆ, ಶಿಕ್ಷಕರಾದ ನೀಲಮ್ಮ, ಸಾರಿಕಾ, ಮಾರುತೆಪ್ಪ, ಪಲ್ಲವಿ, ಸುಮೀತ್, ಜ್ಯೋತಿ, ಪೂಜಾರಾಣಿ, ಶೈಲಜಾ, ಸುಜಾತಾ, ಭಾಗ್ಯಶ್ರೀ, ಪೂಜಾ, ಚಂದ್ರಕಲಾ, ಅಲ್ಕಾವತಿ ಎಚ್,.ಸುನೀತಾ ಇದ್ದರು.