ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆ, ಸಂಗೀತ, ನೃತ್ಯದಂತಹ ಸುಪ್ತ ಪ್ರತಿಭೆ ಹೊರಗೆಳೆಯಲು ಪ್ರತಿಭಾ ಕಾರಂಜಿ ವೇದಿಕೆಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆಯಲು ಪಠ್ಯ ಮುಖ್ಯ. ಪ್ರತಿಭೆ ಪ್ರದರ್ಶಿಸಲು ಇಂತಹ ವೇದಿಕೆಗಳು ಅಗತ್ಯ.
ಕನ್ನಡಪ್ರಭ ವಾರ್ತೆ ಹಲಗೂರು
ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆ, ಸಂಗೀತ, ನೃತ್ಯದಂತಹ ಸುಪ್ತ ಪ್ರತಿಭೆ ಹೊರಗೆಳೆಯಲು ಪ್ರತಿಭಾ ಕಾರಂಜಿ ವೇದಿಕೆಗಳು ಸಹಕಾರಿಯಾಗಿವೆ ಎಂದು ಗ್ರಾಪಂ ಅಧ್ಯಕ್ಷೆ ಗುಲ್ನಾಜ್ ಬಾನು ಅಭಿಪ್ರಾಯಪಟ್ಟರು.ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆಯಲು ಪಠ್ಯ ಮುಖ್ಯ. ಪ್ರತಿಭೆ ಪ್ರದರ್ಶಿಸಲು ಇಂತಹ ವೇದಿಕೆಗಳು ಅಗತ್ಯ ಎಂದರು.
ಮಾರಗೌಡನಹಳ್ಳಿ ಶಾಲೆ ಮುಖ್ಯ ಶಿಕ್ಷಕ ಬೋರೇಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಸಹ ಮಗುವಿನ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದರು.ಸರ್ಕಾರಿ ನೌಕರ ಸಂಘದ ತಾಲೂಕು ಗೌರವಾಧ್ಯಕ್ಷ ಪುಟ್ಟಸ್ವಾಮಿಗೌಡ ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸುವ ಜೊತೆಗೆ ನಿಮ್ಮಲ್ಲಿರುವ ಇತರೆ ಕೌಶಲಗಳನ್ನು ಜಗತ್ತಿಗೆ ಪ್ರದರ್ಶಿಸಬೇಕು. ಸ್ಪರ್ಧೆಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದರು.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲಗೂರು ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಕಂಠಪಾಠ, ಧಾರ್ಮಿಕ ಪಠಣ, ಕಥೆ ಹೇಳುವಿಕೆ, ಅಭಿನಯ ಗೀತೆ, ಭಕ್ತಿ ಗೀತೆ, ಛದ್ಮವೇಷ, ಆಶುಭಾಷಣ, ಮಿಮಿಕ್ರಿ, ದೇಶಭಕ್ತಿ ಗೀತೆ, ಚಿತ್ರಕಲೆ, ಪ್ರಬಂಧ ರಚನೆ ಇತ್ಯಾದಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದರು.ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಸಿ.ಲತಾ, ಮುಖ್ಯ ಶಿಕ್ಷಕ ಕುಳ್ಳಯ್ಯ, ಸರ್ಕಾರಿ ನೌಕರ ಸಂಘದ ಗೌರವ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಬೋರೇಗೌಡ, ಸಿ.ಆರ್.ಪಿ. ಪುಟ್ಟರಾಜು, ಜಿ.ಎಸ್.ಕೃಷ್ಣ, ಸೇರಿದಂತೆ ಹಲವರು ಇದ್ದರು.
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ಹುಸ್ಕೂರು ಮತ್ತು ಅಂತರವಳ್ಳಿ ಗ್ರಾಮಗಳಲ್ಲಿ ಭಾರತೀನಗರ ಧರ್ಮಸ್ಥಳ ಯೋಜನಾ ಕಚೇರಿಯಿಂದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಜಿ.ಮಾದೇಗೌಡ ಆಸ್ಪತ್ರೆ ವೈದ್ಯಾಧಿಕಾರಿ ಜಿತೇಶ್ ಮತ್ತು ಸಿಬ್ಬಂದಿ ಸುಮಾರು 300ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಬಿಪಿ, ಇಸಿಜಿ, ಶುಗರ್ ತಪಾಸಣೆ ನಡೆಸಿದರು.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಇರಬಾರದು. ವ್ಯತ್ಯಾಸ ಕಂಡು ಬಂದರೆ ತಕ್ಷಣ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಗ್ರಾಮೀಣ ಜನರು ಶಿಬಿರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಯೋಜನಾಧಿಕಾರಿ ಸುವರ್ಣ ಭಟ್ ಮಾತನಾಡಿ, ತಿ ವರ್ಷ ತಾಲೂಕಿನಲ್ಲಿ 10 ಕ್ಕೂ ಹೆಚ್ಚು ಕಾರ್ಯಕ್ರಮ ಆಯೋಜನೆ ಮಾಡಿ ಜನರ ಆರೋಗ್ಯ ಕಾಪಾಡುವಲ್ಲಿ ಶ್ರಮ ವಹಿಸುತ್ತಿದ್ದೇವೆ ಎಂದರು.
ಈ ವೇಳೆ ಜಿಲ್ಲಾ ಜನಜಾಗ್ರತಿ ಸದಸ್ಯೆ ಧರಣಿ, ಮುಖಂಡರು, ಜಿ.ಮಾದೇಗೌಡ ಆಸ್ಪತ್ರೆ ವೈದ್ಯಾಧಿಕಾರಿ ಜಿತೇಶ್ ಹಾಗೂ ಸಿಬ್ಬಂದಿ ಸೇರದಂತೆ ಇತರರು ಇದ್ದರು.