ಸಾರಾಂಶ
ರಾಮನಗರ : ಕ್ರೀಡೆಗಳಲ್ಲಿ ತೊಡಗುವುದರಿಂದ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯಗಳನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಕೂಡ ಕ್ರೀಡೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಹೇಳಿದರು.
ರಾಮನಗರ : ಕ್ರೀಡೆಗಳಲ್ಲಿ ತೊಡಗುವುದರಿಂದ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯಗಳನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಕೂಡ ಕ್ರೀಡೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಮನಗರ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲು ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದರು.ಇತ್ತೀಚಿನ ದಿನಗಳಲ್ಲಿ ಮಕ್ಕಳು ಆನ್‌ಲೈನ್ ಕ್ರೀಡೆಗಳಲ್ಲಿ ಆಸಕ್ತಿ ವಹಿಸುತ್ತಿದ್ದಾರೆ. ಯುವ ಪೀಳಿಗೆ ಗ್ರಾಮೀಣ ಕ್ರೀಡೆಗಳನ್ನು ಆಡಬೇಕು ಹಾಗೂ ಮುಂದಿನ ಪೀಳಿಗೆಯವರೆಗೆ ಬೆಳೆಸಬೇಕು, ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ವಿಜೇತರಾದರೇ ಕೆಲವೊಮ್ಮೆ ಸರ್ಕಾರಿ ಉದ್ಯೋಗಗಳನ್ನು ಸಹ ಪಡೆಯಬಹುದು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಮಾತನಾಡಿ, ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಗುಂಪು ಕ್ರೀಡೆಗಳಾದ ಕಬ್ಬಡಿ, ಖೋ ಖೋ, ವಾಲಿಬಾಲ್ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಉತ್ತಮ ಮಟ್ಟದ ವ್ಯಕ್ತಿತ್ವ ರೂಪಿಸುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜ್ಯೋತಿ ಭಾಪುಲೆ ಸಂಘದ ಅಧ್ಯಕ್ಷರು, ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.
9ಕೆಆರ್ ಎಂಎನ್ 4.ಜೆಪಿಜಿನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಉದ್ಘಾಟಿಸಿದರು.