ಸಾರಾಂಶ
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಹಸಿರು ಸೊಪ್ಪು, ತರಕಾರಿ ಹಾಗೂ ಹಣ್ಣು ಸೇರಿದಂತೆ ಕಾಳುಗಳನ್ನು ಸೇವಿಸುವ ಮೂಲಕ ಪೌಷ್ಟಿಕಾಂಶಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ ಸಲಹೆ ನೀಡಿದರು.ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದಲ್ಲಿ ಮಾತನಾಡಿದರು.
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು ಎಂದರು.ಪೌಷ್ಟಿಕ ಆಹಾರದ ಕಡೆ ಗಮನ ಹರಿಸಿ ಕಬ್ಬಿಣಾಂಶ ಹೇರಳವಾಗಿರುವ ಹಸಿರು ಸೊಪ್ಪು, ತಾಜಾ ತರಕಾರಿ, ಮೊಳಕೆ ಬರಿಸಿದ ಕಾಳುಗಳು ಮುಂತಾದ ಆಹಾರ ಪದಾರ್ಥಗಳನ್ನು ನಿತ್ಯ ಬಳಸಬೇಕು ಹಾಗೂ ಆರೋಗ್ಯ ಇಲಾಖೆಯಿಂದ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಕಡ್ಡಾಯವಾಗಿ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರದ ಪದಾರ್ಥಗಳನ್ನು ಪ್ರದರ್ಶಿಸಲಾಯಿತು. ಮುಖಂಡರಾದ ನಂಜೇಗೌಡ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಾರಾಮು, ಸಮುದಾಯ ಆರೋಗ್ಯ ಅಧಿಕಾರಿ ಕಾವೇರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂ.ಆರ್ ದೀಪ, ಅಂಗನವಾಡಿ ಕಾರ್ಯಕರ್ತೆಯರಾದ ಕಲ್ಪನ, ಉಮಾ ಎಸ್, ಪವಿತ್ರ, ಚೈತ್ರ, ಪುಷ್ಪಲತಾ, ಆಶಾ ಕಾರ್ಯಕರ್ತೆಯರಾದ ಕವಿತ, ಪುಷ್ಪಾ, ಮಹಾಲಕ್ಷ್ಮೀ, ಮೀನಾಕ್ಷಿ ಹಾಗೂ ಗರ್ಭಿಣಿಯರು, ಬಾಣಂತಿಯರು, ಮಕ್ಕಳ ತಾಯಂದಿರು ಇದ್ದರು.