ಕೆಜಿಎಫ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

| Published : Nov 15 2024, 12:38 AM IST

ಕೆಜಿಎಫ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಜವಹರಲಾಲ್ ನೆಹರು ಮರಣದ ನಂತರ ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ನ್ಯಾಯಾಧೀಶರಾದ ವಿನೋಧ್‌ ಕುಮಾರ್‌ ಹೇಳಿದ್ದಾರೆ

ಕನ್ನಡಪ್ರಭ ವಾರ್ತೆ ಕೆಜಿಎಫ್ಮಕ್ಕಳು ತಮಗೆ ಹಕ್ಕುಗಳ ಬಗ್ಗೆ ಅರಿತುಕೊಂಡು ದೌರ್ಜನ್ಯಗಳು ನಡೆದ ಸಂದರ್ಭದಲ್ಲಿ ಸರ್ಮಪಕವಾಗಿ ಕಾನೂನು ಸದ್ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ. ವಿನೋದ್‌ಕುಮಾರ್ ತಿಳಿಸಿದರು.ಕೆಜಿಎಫ್ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಉದ್ಘಾಟಿಸಿದ ಮಾತನಾಡಿದರು.ದೇಶದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಮರಣದ ನಂತರ ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು 1947 ರಿಂದ 1968 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮಕ್ಕಳು ಪ್ರೀತಿಯಿಂದ ಅವರನ್ನು ಚಾಚಾ ನೆಹರು ಎಂದು ಕರೆಯುತ್ತಿದ್ದರು ಎಂದು ತಿಳಿಸಿದ್ದರು.ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಗೌಡ ಮಾತನಾಡಿ, ಮಕ್ಕಳ ಹಕ್ಕುಗಳು ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಈ ದಿನವನ್ನು ಮೀಸಲಿರಿಸಲಾಗಿದೆ. ಮಕ್ಕಳಿಗಾಗಿ ಹಲವು ಕಾನೂನುಗಳು ಇದ್ದು ಸರ್ಮಪಕವಾಗಿ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೆಕೆಂದು ಕರೆ ನೀಡಿದರು.ಬಿಇಓ ಮುನಿವೆಂಕಟರಾಮಾರಿ ಮಾತನಾಡಿ, ಸಮಾಜದ ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣದ ಹಕ್ಕು ಪಡೆದಿದ್ದು, 1 ರಿಂದ 14 ವರ್ಷದ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಿ ಪ್ರತಿಯೊಬ್ಬರನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.

ವಿವಿಧ ಕ್ರೀಡಾ ಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ವಕೀಲ ಮಣಿವಣ್ಣನ್, ವಸತಿ ಶಾಲೆಯ ಪ್ರಾಂಶುಪಾಲ ನಾಗರಾಜ್, ಶಿಕ್ಷಕ ಅಶ್ವಥ್ ಇದ್ದರು.