ಸಾರಾಂಶ
ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಪ್ರತಿ ವರ್ಷ ನ.14ರಂದು ಭಾರತದ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ಜನ್ಮ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ರಿಜೇಶ.ಪಿ.ಎನ್ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಪ್ರತಿ ವರ್ಷ ನ.14ರಂದು ಭಾರತದ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ಜನ್ಮ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ರಿಜೇಶ.ಪಿ.ಎನ್ ಹೇಳಿದರು.ನಗರದ ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಜವಾಹರಲಾಲ ನೆಹರು ಅವರು ಮಕ್ಕಳ ಬಗ್ಗೆ ಒಲವು ಹೊಂದಿದ್ದರು. ಏಕೆಂದರೆ ಮಕ್ಕಳು ಭಾವಿ ಭಾರತದ ಆಶಾ ಕಿರಣಗಳು, ಮನೆ ಅಂಗಳದ ನಂದಾ ದೀಪಗಳು ಅವರು ಭಾರತದ ಭವಿಷ್ಯದ ಉಜ್ವಲತಾರೆಗಳು ಎಂದರು.ವಿದ್ಯಾರ್ಥಿಗಳು, ಶಾಲೆಯ ಬೋಧಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಶೈಕ್ಷಣಿಕ ಕಾರ್ಯಸಂಯೋಜಕಿ ಕಮರಪಾರಾ ಖಾಜಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.