ಸಾರಾಂಶ
ಪುಷ್ಪಾನಂದ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯನ್ನು ಫೌಂಡೇಶನ್ ಪ್ರವರ್ತಕ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಪುಷ್ಪಾನಂದ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯನ್ನು ಫೌಂಡೇಶನ್ ಪ್ರವರ್ತಕ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ಈ ಬಾರಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಲಿಯುತ್ತಿರುವ ಸುಮಾರು 17,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪೆನ್ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಯೋಗ, ಈಜು ತರಬೇತಿ, ಸಂಗೀತ ದಂತಹ ಪಠ್ಯೇತರ ಚಟುವಟಕೆಗಳಿಗೂ ಪ್ರೋತ್ಸಾಹಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ಅತಿಥಿಗಳಾಗಿ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಮಾ ಎಸ್., ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಇಂದಿರಾ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಉಪಾಧ್ಯಕ್ಷ ಶೇಕ್ ಆಸೀಫ್ ಹಾಗೂ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.