ಶಿರ್ವ ಮಹಿಳಾ ಮಂಡಲದಿಂದ ಮಕ್ಕಳ ದಿನಾಚರಣೆ: ಕಲರವ

| Published : Nov 18 2024, 12:05 AM IST

ಸಾರಾಂಶ

2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರ್ವ ಮಹಿಳಾ ಮಂಡಲದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಕಲರವ ಕಾರ್ಯಕ್ರಮವು ಜರುಗಿತು.

ಕನ್ನಡಪ್ರಭ ವಾರ್ತೆ ಕಾಪು

2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರ್ವ ಮಹಿಳಾ ಮಂಡಲದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಕಲರವ ಕಾರ್ಯಕ್ರಮವು ಶನಿವಾರ ಸಂಜೆ ಜರುಗಿತು.

ಶಿರ್ವ ಗ್ರಾಮದ ಅಂಗನವಾಡಿಗಳ ಸುಮಾರು 75 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ವೇದಿಕೆಯಲ್ಲಿ ತಮ್ಮ ನೃತ್ಯದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಕಾಪು ಶಾಸಕ ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.‌ ನಂತರ ಮಂಡಲಕ್ಕೆ ರಾಜ್ಯೋತ್ಸವ ಪ್ರಶಸ್ತಿ ಬಂದಿರುವ ಹಿನ್ನೆಲೆಯಲ್ಲಿ ಅಧ್ಯಕ್ಷೆ ಡಾ.ಸ್ಪೂರ್ತಿ ಶೆಟ್ಟಿ ಅವರನ್ನು ವೈಯಕ್ತಿಕವಾಗಿ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.ಮುಖ್ಯ ಅತಿಥಿಯಾಗಿ ಶಿರ್ವ ಗ್ರಾಪಂ ಅಧ್ಯಕ್ಷೆ ಸವಿತಾ ರಾಜೇಶ್ ಅವರು ಶಿರ್ವ ಮಹಿಳಾ ಮಂಡಲಕ್ಕೆ ಸಿಕ್ಕಿರುವ ಈ ಪ್ರಶಸ್ತಿ ಇಡೀ ಶಿರ್ವ ಗ್ರಾಮಕ್ಕೇ ಸಂದ ಗೌರವವಾಗಿದೆ. ಮಂಡಲದ ಅಸಂಖ್ಯ ಸಾಮಾಜಿಕ ಚಟುವಟಿಕೆಗಳು ಎಲ್ಲರಿಗೂ ಮಾದರಿಯಾಗಿವೆ ಎಂದರು.ಡಾ.ಸ್ಪೂರ್ತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಶಿರ್ವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ ಸುಂದರ ಪ್ರಭು, ಶ್ರೀಪತಿ ಕಾಮತ್, ಅಧ್ಯಕ್ಷ ವಿಟ್ಠಲ ಆಂಚನ್, ಉದ್ಯಮಿ ಜಗದೀಶ್ ಅರಸ, ಶಿರ್ವ ಎಂಎಸ್ ಆರ್ ಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ||ವೈ ಭಾಸ್ಕರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಮಿಥುನ್ ಚಕ್ರವರ್ತಿ, ಉಪಪ್ರಾಂಶುಪಾಲೆ ನಿಶಾ ಶೆಟ್ಟಿ, ರೋಟರಿ ಕ್ಲಬ್ ಶಿರ್ವ ಮಾಜಿ ಅಧ್ಯಕ್ಷ ಡಾ.ವಿಟ್ಠಲ್ ನಾಯಕ್, ಶಿರ್ವ ಗ್ರಾಪಂ ಮಾಜಿ ಉಪಾಧ್ಯಕ್ಷೆ ಗ್ರೇಸಿ ಕರ್ಡೋಜ, ಸಮಾಜ ಸೇವಕ ಅನಂತ್ರಾಯ ಶೆಣೈ ಮುಂತಾದವರು ಉಪಸ್ಥಿತರಿದ್ದರು.ಮಂಡಲದ ಗೌರವ ಸಲಹೆಗಾರರಾದ ಗೀತಾ ವಾಗ್ಳೆ ಅವರು ಸ್ವಾಗತಿಸಿದರು. ಕಾರ್ಯದರ್ಶಿ ಐರಿನ್ ಪಿಂಟೋ ಅವರು ವರದಿ ವಾಚಿಸಿದರು. ಜಯಶ್ರೀ ಜಯಪಾಲ್ ಶೆಟ್ಟಿ ಮತ್ತು ಸುನೀತಾ ಕಳತ್ತೂರು ಕಾರ್ಯಕ್ರಮ ನಿರೂಪಿಸಿದರು. ವಿನಯಾ ಕುಂದರ್ ಅವರು ಪುಟಾಣಿಗಳ ಪಟ್ಟಿಯನ್ನು ವಾಚಿಸಿದರು. ಕೋಶಾಧಿಕಾರಿ ದೀಪಾ ಶೆಟ್ಟಿ ಧನ್ಯವಾದ ಅರ್ಪಿಸಿದರು.