ಸಾರಾಂಶ
ಮೂಲ್ಕಿಯ ಸಿಎಸ್‌ಐ ಬಾಲಿಕಾಶ್ರಮದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಸಂಯೋಜನೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಮೂಲ್ಕಿ: ಮಕ್ಕಳ ಆತ್ಮಸ್ಥೈರ್ಯ ಹೆಚ್ಚಿಸಿಲು ಪ್ರಯತ್ನ ಪಟ್ಟಲ್ಲಿ ಮನೋವಿಕಸನ ಸಾಧ್ಯವಿದೆ. ಮಕ್ಕಳಲ್ಲಿ ದೇವರನ್ನು ಕಾಣುವ ನಾವು ಅವರಲ್ಲಿನ ಭಾವನೆಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಮೂಲ್ಕಿಯ ಸಿಎಸ್‌ಐ ಬಾಲಿಕಾಶ್ರಮದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಸಂಯೋಜನೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಯುವ ಉದ್ಯಮಿ ರಾಹುಲ್ ಚಂದ್ರಶೇಖರ್ ಕಾರ್ಯಕ್ರಮ ಸಂಯೋಜಿಸಿ, ವಿವಿಧ ಶಿಕ್ಷಣ ಪರಿಕರಗಳನ್ನು ಎಲ್ಲಾ ಮಕ್ಕಳಿಗೆ ವಿತರಿಸಿದರು.
ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್, ರಾಘವ ಸೂರ್ಯ, ನ್ಯಾಯವಾದಿ ರೋಶನಿ ಚಂದ್ರಶೇಖರ್ ಉದ್ಯಮಿ ಎಂ. ಸಾದಿಕ್ ಅಹಮದ್ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.ಆಶ್ರಮದ ಸಂಚಾಲಕ ಪುನಿತ್‌ಕೃಷ್ಣ ಸ್ವಾಗತಿಸಿದರು. ವಕ್ತಾರ ನರೇಂದ್ರ ಕೆರೆಕಾಡು ನಿರೂಪಿಸಿದರು. ಬಾಲಿಕಾಶ್ರಮದ ಮೇಲ್ವಿಚಾರಕಿ ಶಾಂತಿ ವಂದಿಸಿದರು.
ಮಕ್ಕಳೊಂದಿಗೆ ಮಕ್ಕಳಾದ ಸ್ವಾಮೀಜಿ:ಈ ಸಂದರ್ಭ ಶ್ರೀ ಚಂದ್ರಶೇಖರ ಸ್ವಾಮೀಜಿ ಮಕ್ಕಳ ಮುಗ್ದ ಪ್ರಶ್ನೆಗಳಿಗೆ ಉತ್ತರಿಸಿ, ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಈ ಭೇಟಿ ನೀಡಿದ್ದೇವೆ, ತಾವು ಮೂಲ್ಕಿಯಲ್ಲಿ ಪಡೆದ ಶಿಕ್ಷಣದ ಬಗ್ಗೆ, ನಿಷ್ಠೆ ಪ್ರಾಮಾಣಿಕತೆಯ ಜೊತೆಗೆ ಶಿಸ್ತುಬದ್ಧ ಜೀವನ ನಡೆಸಿದಲ್ಲಿ ಯಶಸ್ಸು ಸಾಧ್ಯವಿದೆ ಎಂದರು. ಮಕ್ಕಳೊಂದಿಗೆ ಸಂವಾದ ನಡೆಸಿ, ತಮ್ಮ ಅನುಭವ ಹಂಚಿಕೊಂಡರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))