ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಬೆಳೆಸಲು ಮಕ್ಕಳ ಸಂತೆ ಸಹಕಾರಿ ಎಂದು ಎಸ್‌ಡಿಎಂಸಿ ಅಧ್ಯಕ್ಷ ಯತೀಶ್ ಸಿ .ಎಸ್. ಹೇಳಿದರು.ಪೆರಾಜೆ ಕುಂದಲ್ಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.ಶಾಲಾ ಕಲಿಕಾ ಅವಧಿಯಲ್ಲಿ ಪಠ್ಯ ವಿಷಯಗಳ ಜೊತೆ ಸಹಪಠ್ಯ ವಿಷಯಗಳ ಅಭ್ಯಾಸ ಬೇಕು. ಕ್ರೀಡೆ, ಶಿಸ್ತು ವ್ಯವಹಾರ ಕೌಶಲ್ಯ ಭಾಷೆ ಬೆಳವಣಿಗೆ ಇತ್ಯಾದಿಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತಾವು ತಂದ ಸರಕುಗಳನ್ನು ಮಾರಾಟ ಮಾಡಿದರು. ಶಾಲೆಯಲ್ಲಿ ಸಂತೆಯ ವಾತಾವರಣ ನಿರ್ಮಾಣವಾಗಿತ್ತು. ಶಾಲಾ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್, ಎಸ್‌ಡಿಎಂಸಿ ಸದಸ್ಯರು , ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.