ಸಾರಾಂಶ
ವಿಜಯಪುರ: ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ಲಸ್ಟರ್ ಹಂತದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಹಬ್ಬ ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಅನಂತಕುಮಾರಿಚಿನ್ನಪ್ಪ ಹೇಳಿದರು.
ಹೋಬಳಿಯ ಹಾರೋಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಎಫ್‌ಎಲ್‌ಎನ್ ಮಕ್ಕಳ ಕಲಿಕಾ ಹಬ್ಬದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ೧-೫ನೇ ತರಗತಿ ಮಕ್ಕಳಿಗೆ ವಿಶೇಷ ಕಲಿಕಾ ತರಬೇತಿ ನೀಡಿ, ಅವರು ಕಲಿತಿರುವ ಶೈಕ್ಷಣಿಕ ಪ್ರಗತಿ ಪ್ರದರ್ಶನ ಮಾಡುವ ಸಲುವಾಗಿ ಕಲಿಕಾ ಹಬ್ಬ ಆಯೋಜಿಸುತ್ತಿದೆ ಎಂದರು.ಗ್ರಾಪಂ ಅಧ್ಯಕ್ಷ ಹಾರೋಹಳ್ಳಿ ಚಂದ್ರಪ್ಪ ಮಾತನಾಡಿ, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರು ಇಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳನ್ನು ಅರ್ಥ ಮಾಡಿಕೊಳ್ಳಬೇಕು. ಮಕ್ಕಳಿಗೆ ಕಲಿಕಾ ಹಬ್ಬ, ಪ್ರತಿಭಾ ಕಾರಂಜಿ, ಮೆಟ್ರಿಕ್ ಮೇಳ ಇತ್ಯಾದಿ ಕಾರ್ಯಕ್ರಮಗಳು ಮತ್ತಷ್ಟು ಉತ್ತೇಜನ ಪಡಿಸುತ್ತವೆ. ಇದರ ಜೊತೆಗೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಖ್ಯಶಿಕ್ಷಕಿ ಕಮಲಮ್ಮ ಮಾತನಾಡಿ, ಕ್ಲಸ್ಟರ್ ಮಟ್ಟದ ೧೪ ಶಾಲೆಗಳಿಂದ ೧೫೦ಕ್ಕೂ ಹೆಚ್ಚು ಮಕ್ಕಳ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನಗೊಂಡು ಕ್ರಿಯಾತ್ಮಕತೆ ಹೆಚ್ಚುತ್ತದೆ. ಗ್ರಗಣ ಸಾಮರ್ಥ್ಯ ಅವರಲ್ಲಿ ವೃದ್ಧಿಯಾಗಲಿದೆ ಎಂದರು.ಸಿಆರ್‌ಪಿ ಮುನಿಯಪ್ಪ, ಗ್ರಾಪಂ ಅಧ್ಯಕ್ಷ ಸುಮಾದೇವಿ, ಕಾಂಗ್ರೆಸ್ ಮುಖಂಡ ರಘು, ಚಂದ್ರಕಲಾ, ಶಶಿಕಲಾ ಪಿಡಿಒ ಆರ್.ಜಿ.ಸೌಮ್ಯ, ಕಾರ್ಯದರ್ಶಿ ರಾಜೇಶ್, ಬಿಇಒ ಸುಮಾ, ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ, ಬಿಆರ್‌ಪಿ ಚಂದ್ರಶೇಖರ್, ರವೀಂದ್ರ ಸೇರಿದಂತೆ ಎಲ್ಲಾ ಶಾಲೆಗಳ ಕ್ಲಸ್ಟರ್ ಹಂತದ ಶಿಕ್ಷಕರು, ಮಕ್ಕಳು ಹಾಜರಿದ್ದರು.
(ಫೋಟೋ ಕ್ಯಾಪ್ಷನ್)ವಿಜಯಪುರ ಹೋಬಳಿಯ ಹಾರೋಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಎಫ್‌ಎಲ್‌ಎನ್ ಮಕ್ಕಳ ಕಲಿಕಾ ಹಬ್ಬನಡೆಯಿತು.